
ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ – CM
ಬೆಂಗಳೂರು: ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿದ್ದು, ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ ನಡೆಸಿದರು.
ಪ್ರಕರಣದಲ್ಲಿ 11 ಮಂದಿ ಮೃತಪಟ್ಟಿದ್ದು, 33 ಮಂದಿ ಗಾಯಗೊಂಡಿದ್ದಾರೆ ಎಂದು ಸಿಎಂ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ ಅವರು, ಗಾಯಾಳುಗಳಿಗೆ ಸರ್ಕಾರದಿಂದಲೇ ಉಚಿತ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.
ಇದೊಂದು ಅನಿರೀಕ್ಷಿತ ಘಟನೆ ಎಂದು ವಿಷಾಧಿಸಿದ ಅವರು, ಸಂಭ್ರಮಾಚರಣೆಗೆ ಇದ್ದಕ್ಕಿದ್ದಂತೆ ಲಕ್ಷಾಂತರ ಜನರು ಬಂದಿದ್ದರಿಂದ ಹೀಗಾಗಿದೆ ಎಂದು ಅವರು ಹೇಳಿದರು. ಈ ಘಟನೆ ಆಗಬಾರದಾಗಿತ್ತು ಎಂದು ಹೇಳಿದರು.