
– 2 ಡ್ಯಾಂನ ಎಲ್ಲಾ ಗೇಟ್ ಬಂದ್
– ಚೆನಾಬ್ ನದಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಭಾರತ
– ಮೊದಲ ಬಾರಿಗೆ ನದಿಯನ್ನು ದಾಟುತ್ತಿದ್ದಾರೆ ಜನ
ಶ್ರೀನಗರ: ಪಹಲ್ಗಾಮ್ ಭೀಕರ ನರಮೇಧಕ್ಕೆ (Pahalgam Terror Attack) ಪ್ರತಿಯಾಗಿ ಭಾರತ ಈಗ ಪಾಕಿಸ್ತಾನದ ಬುಡಕ್ಕೆ `ಜಲ’ಬಾಂಬ್ ಹಾಕಿದೆ. ಸಿಂಧೂ ನದಿಯ (Sindhu River) ಒಪ್ಪಂದವನ್ನು ಭಾರತ ಅಮಾನತಿನಲ್ಲಿಟ್ಟ ಬೆನ್ನಲ್ಲೇ ಚೆನಾಬ್ ನದಿಗೆ (Chenab river) ಜಲಾಶಯಗಳಿಂದ ನೀರು ಹರಿಸುವುದನ್ನೇ ನಿಲ್ಲಿಸಿದೆ.
ಚೆನಾಬ್ ನದಿಗೆ ಅಡ್ಡಲಾಗಿ ರಾಮಬನದಲ್ಲಿ ಬಾಗ್ಲಿಹಾರ್ ಮತ್ತು ರಿಯಾಸಿಯಲ್ಲಿ ಸಲಾಲ್ ಜಲವಿದ್ಯುತ್ ಅಣೆಕಟ್ಟುಗಳನ್ನು ನಿರ್ಮಾಣ ಮಾಡಲಾಗಿದೆ. ಈಗ ಈ ಎರಡು ಅಣೆಕಟ್ಟಿನಿಂದ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಝೀಲಂ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಶನ್ಗಂಗಾ ಅಣೆಕಟ್ಟಿನಿಂದಲೂ ನೀರು ಹರಿಸುವುದನ್ನು ನಿಲ್ಲಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಮಾಧ್ಯಮಕ್ಕೆ ಸ್ಥಳೀಯ ವ್ಯಕ್ತಿ ದಿನೇಶ್ ಪ್ರತಿಕ್ರಿಯಿಸಿ, ಸರ್ಕಾರ ಪಾಕಿಸ್ತಾನಕ್ಕೆ ನೀರು ಹರಿಯುವುದನ್ನು ನಿಲ್ಲಿಸಿದ್ದಕ್ಕೆ ನಮಗೆ ಸಂತೋಷವಾಗಿದೆ. ಪಾಕಿಸ್ತಾನದ ಪಹಲ್ಗಾಮ್ನಲ್ಲಿ ಅವರು ನಮ್ಮ ಪ್ರವಾಸಿಗರನ್ನು ಕೊಂದ ರೀತಿಗೆ ಸೂಕ್ತ ಉತ್ತರ ನೀಡಬೇಕು. ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರದಲ್ಲಿ ನಾವು ಅದರೊಂದಿಗಿದ್ದೇವೆ ಎಂದು ಹೇಳಿದರು.