ಇತ್ತೀಚಿನ ಸುದ್ದಿ

HRMS’ ತಂತ್ರಾಂಶದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ..!

ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳ ಸೇವಾ ವಿವರಗಳನ್ನು ಹೆಚ್.ಆರ್.ಎಂ.ಎಸ್ ತಂತ್ರಾಂಶದ ವಿದ್ಯುನ್ಮಾನ ಸೇವಾ ವಹಿಯ (Electronic Service Register-ESR) ಸ್ವರೂಪದಲ್ಲಿ ದಾಖಲಿಸಿ ನಿರ್ವಹಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸೇವೆಯಲ್ಲಿರುವ ಎಲ್ಲಾ Group B (Non Gazetted)/Group C/Group D ಅಧಿಕಾರಿ/ಸಿಬ್ಬಂದಿಗಳ ಸೇವಾ ವಹಿಯನ್ನು ಹೆಚ್.ಆರ್.ಎಂ.ಎಸ್-2 ಯೋಜನೆಯ ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿಯ (Electronic Service Register-ESR) ನಲ್ಲಿಯೇ ಅನುಷ್ಠಾನಗೊಳಿಸಲು ನಿರ್ದೇಶನ ನೀಡಲಾಗಿದೆ.

ಹೆಚ್.ಆ‌ರ್.ಎಂ.ಎಸ್-2.0 ರಲ್ಲಿ ಅನುಷ್ಠಾನಗೊಳಿಸುವ ಸಂಬಂಧ, ವಿದ್ಯುನ್ಮಾನ ಸೇವಾ ವಹಿಯನ್ನು ಸಿದ್ಧಪಡಿಸಲಾಗಿದೆ. ಈ ತಂತ್ರಾಂಶವು ನೌಕರಸ್ನೇಹಿಯಾಗಿದೆ. ನಿರ್ವಹಣೆಯೂ ಬಹಳ ಸರಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸೇವೆಗೆ ನೇಮಕಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಿವರಗಳ ಮಾಹಿತಿಯು ಈಗಾಗಲೇ ಹೆಚ್.ಆ‌ರ್.ಎಂ.ಎಸ್-1.0 ತಂತ್ರಾಂಶದಲ್ಲಿ ಲಭ್ಯವಿದ್ದು, ಸದರಿ ಮಾಹಿತಿಯನ್ನು ವಿದ್ಯುನ್ಮಾನ ಸೇವಾ ವಹಿಗೆ (ESR) ವರ್ಗಾಯಿಸಲು ಕೂಡ ಈ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ಸಿಬ್ಬಂದಿಗಳ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ ESR ನಲ್ಲಿಯೇ ಮುಂದುವರೆಸುವಂತೆ ತಿಳಿಸಲಾಗಿದೆ.

ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ ESR ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿಲ್ಲದಿರುವ ಕಾರಣ ಹೆಚ್.ಆರ್.ಎಂ.ಎಸ್-1.0 ತಂತ್ರಾಂಶದಲ್ಲಿ ಲಭ್ಯವಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ಕೂಡಲೇ ಪರಿಶೀಲಿಸಿ, ಅವಶ್ಯಕತೆ ಇದ್ದಲ್ಲಿ ಸರಿಪಡಿಸುವಂತೆ ಹಾಗೂ ಸೇರಿಸಲು ಸೂಚಿಸಲಾಗಿದೆ.

ಎಲ್ಲಾ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ESR ಗೆ ವರ್ಗಾಯಿಸುವ ಪೂರ್ಣ ಜವಾಬ್ದಾರಿಯು Drawing and Disbursing Officer ಆಗಿರುತ್ತದೆ. ESR ಸುಗಮ ಮತ್ತು ಪರಿಣಾಮಕಾರಿ ಅನುಷ್ಠಾನ ಉದ್ದೇಶಕ್ಕಾಗಿ ಎಲ್ಲಾ Drawing and Disbursing Officers ಅಧಿಕಾರಿಗಳಿಗೆ ಕೆಳಕಂಡಂತೆ ತರಬೇತಿಯನ್ನು ಆಯೋಜಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button